Menu

ಸಚಿವ ಜೈಶಂಕರ್‌ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ ಯತ್ನ

ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೇಲೆ ಖಲಿಸ್ತಾನಿ ಉಗ್ರರು ಲಂಡನ್‌ನಲ್ಲಿ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಚಾಥಮ್ ಹೌಸ್ ನಲ್ಲಿ ನಡೆಸಿದ ಚರ್ಚೆಯಲ್ಲಿ ಜೈಶಂಕರ್‌ ಭಾಗವಹಿಸಿದ್ದಾಗ ಹೊರಗೆ ಖಲಿಸ್ತಾನ್ ಪರ ಬೆಂಬಲಿಗರು ಧ್ವಜಗಳನ್ನು ಪ್ರತಿಭಟನೆ ನಡೆಸಿದರು. ಲಂಡನ್ ಪೊಲೀಸ್ ಅಧಿಕಾರಿಗಳ ಮುಂದೆಯೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ