Khata
ಫೆ. 10ರೊಳಗೆ ಖಾತಾ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಖಡಕ್ ಸೂಚನೆ
ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಖಾತಾ ವಿಚಾರದಲ್ಲಿ ಆಗುತ್ತಿರುವ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಹೇಳಿದ್ದಾರೆ. ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ