KIADB
ಸಿಎಂ ಪರಿಹಾರ ನಿಧಿಗೆ ಎರಡು ಕೋಟಿ ರೂ. ಲಾಭಾಂಶ ನೀಡಿದ ಕೆಐಎಡಿಬಿ
ಬೆಂಗಳೂರಿನ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆಐಎಡಿಬಿಯ ಎರಡು ಕೋಟಿ ರೂ. ಲಾಭಾಂಶವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ


