KIAL
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚೆಕ್-ಇನ್: ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಾಣೆಯೆಂದು ಹುಬ್ಬಳ್ಳಿ ಮಹಿಳೆ ದೂರು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದಿಂದ ದುಬೈಗೆ ತೆರಳುತ್ತಿದ್ದ ಹುಬ್ಬಳ್ಳಿಯ ಮಹಿಳೆಯೊಬ್ಬರ ಲಗೇಜ್ ಬ್ಯಾಗ್‌ನಲ್ಲಿದ್ದ ಚಿನ್ನ ಮತ್ತು ವಜ್ರಾಭರಣಗಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಏರ್ಪೋರ್ಟ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿ ಮೂಲದ ಈ ಮಹಿಳೆ ಕಳೆದ ನವೆಂಬರ್ ತಿಂಗಳಲ್ಲಿ ದುಬೈ ಮೂಲಕ ಅಮೆರಿಕಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಇತ್ತೀಚೆಗೆ ರಾಜ್ಯಕ್ಕೆ ವಾಪಸ್ ಆಗಿದ್ದು, ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದಾರೆ. ಚೆಕ್-ಇನ್ ವೇಳೆ ಲಗೇಜ್ ಬ್ಯಾಗ್‌ನೊಳಗೆ ಚಿನ್ನಾಭರಣ ಇರುವುದನ್ನು


