Menu

500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋಟ್​​ ಅವರಿಗೆ ಮನವಿ ಮಾಡಿದ್ದಾರೆ. 2015ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ