Menu

ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೈದಿ ಪರಾರಿ

ಬಿಜಾಪುರದಿಂದ ಬೆಂಗಳೂರಿನ‌ ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಆಗಿದ್ದ ಆರೋಪಿಯನ್ನು ಚಿಕಿತ್ಸೆಗಾಗಿ ಪೊಲೀಸರು ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ, ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು ಸಿಬ್ಬಂದಿ ಕಣ್ತಪ್ಪಿಸಿ ಓಡಿ ಹೋಗಿದ್ದಾನೆ. ಆರೋಪಿ‌ ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ, ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯ ಬೇಜವಾಬ್ದಾರಿಯಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.  ಸಿದ್ದಾಪುರ ಪೊಲೀಸ್