killers flee
ಬೆಂಗಳೂರಿನ ಮನೆಯಲ್ಲಿ ಮಹಿಳೆಯ ಕೊಲೆಗೈದು ಹಂತಕರು ಪರಾರಿ
ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರಲ್ಲಿ ಗೃಹಿಣಿ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿರಸಿಯ ಪ್ರಮೋದಾ(35) ಹತ್ಯೆಯಾದ ಮಹಿಳೆ. ಹತ್ಯೆಯಾದ ಮಹಿಳೆಯ ಪತಿ ಸುರೇಶ, ಅಕ್ಕ ತಂಗಿ ಇಬ್ಬರನ್ನು ಮದುವೆಯಾಗಿದ್ದ. ಕೊಲೆಯಾಗಿರುವ ಪ್ರಮೋದಾ ಎರಡನೇ ಹೆಂಡತಿ. ಆಕೆಗೆ ಇಬ್ಬರು ಮಕ್ಕಳಿದ್ದು, ದಾಂಪತ್ಯ ಕಲಹದಿಂದ ಪತಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸವಿದ್ದರು. ಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.


