Menu

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆಜೆ ಜಾರ್ಜ್

ರಾಮನಗರ, ಜ. 7, 2024: ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತಾಂತ್ರಿಕ ವಿಚಾರವಾಗಿದ್ದು, ತನಿಖೆಯ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ತ್ಯಾಜ್ಯ ಘಟದಿಂದ ಬೂದಿ ಹೊರಹೋಗುವ