Friday, September 19, 2025
Menu

ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದರು. ರಾತ್ರಿ ಮಲಗಿದ್ದಾಗ ಹೃದಯಾಘಾತದಿಂದ ಅಸು ನೀಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಆಚಂಪಲ್ಲಿ ಗ್ರಾಮದಲ್ಲಿ ಮುನಿ ನಾರಾಯಣ ಅಂತ್ಯಸಂಸ್ಕಾರ ನಡೆಯಲಿದೆ. ಒಂದೇ

ಅಕ್ರಮ ಸಂಬಂಧ ಬಯಲು: ಅತ್ತೆ ಮೇಲೆ ಹಲ್ಲೆಗೈದ ಸೊಸೆ ಮತ್ತು ಪ್ರಿಯಕರ ಅರೆಸ್ಟ್‌

ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗುಮ್ಮಲಪಲ್ಲಿ ಗ್ರಾಮದಲ್ಲಿ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.  ಸೊಸೆ ಹಾಗೂ ಪ್ರಿಯಕರ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮ್ಮಲಪಲ್ಲಿ ಗ್ರಾಮದ

ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್‌ ಬಲಿ

ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ

ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ

ಜಾತಿಗಣತಿ ಜನತೆಗೆ ಖುಷಿಯಾದರೆ ಬಿಜೆಪಿಗೆ ಸಹಿಸಿಕೊಳ್ಳಕ್ಕೆ ಆಗುತ್ತಿಲ್ಲ: ಸಚಿವ ಬೈರತಿ ಸುರೇಶ್

ಕೋಲಾರ: ಜಾತಿಗಣತಿ ವರದಿ ಜಾರಿಗೆ ತಂದಿರುವುದು ರಾಜ್ಯದ ಜನತೆಗೆ ಖುಷಿ ಉಂಟು ಮಾಡಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್

ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ

ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)

ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್‌ ಸಿಬಿಐಗೆ ನೀಡಿದ ಹೈಕೋರ್ಟ್

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ  ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್

ಬೆಳಗಾವಿ ಗಲಾಟೆ ಮುಂದುವರೆದರೆ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ದ : ಶಿವರಾಜ್ ತಂಗಡಗಿ

ಕೋಲಾರ: ಬೆಳಗಾವಿಯಲ್ಲಿ ಗಲಾಟೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಕಠಿಣ ಕ್ರಮವಹಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಎಚ್ಚರಿಸಿದರು. ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ

315 ಕೋಟಿ ರೂ. ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ

ವೇಮಗಲ್ (ಕೋಲಾರ ಜಿಲ್ಲೆ): ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ್ಕೆ ಗುರುವಾರ ಆರಂಭಗೊಂಡಿತು.