Menu

ಕೋಲ್ಕತ್ತಾದ ಹೋಟೆಲ್‌ನಲ್ಲಿ 14 ಮಂದಿ ಬೆಂಕಿಗೆ ಬಲಿ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಬೆಂಕಿ ದುರಂತ ನಡೆದಿದ್ದು, ಕನಿಷ್ಠ 14 ಜನರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. 14 ಶವಗಳನ್ನು ಹೊರತೆಗೆಯಲಾಗಿದೆ. ಹಲವರನ್ನು ರಕ್ಷಿಸಿದ್ದು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ