Menu

ಮದುವೆ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ: ವಧುವೇ ಸೂತ್ರಧಾರಿ

ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದ ವರನ ಅಡ್ಡಗಟ್ಟಿ ಚಾಕು ಇರಿದು ಗುಂಪು ಪರಾರಿಯಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಈ ಕೃತ್ಯದ ರೂವಾರಿ ಆತನನ್ನು ಮದುವೆಯಾಗಬೇಕಿದ್ದ ವಧು ಎಂಬ ಸತ್ಯವನ್ನು ಬಯಲಿಗೆಳೆದಿದ್ದಾರೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್‌ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ಗುಂಪು