Menu

ಕೊಲ್ಲೂರು ದೇಗುಲ ನಕಲಿ ವೆಬ್‌ಸೈಟ್‌: ಭಕ್ತರಿಗೆ ವಂಚಿಸುತ್ತಿದ್ದಾತ ರಾಜಸ್ಥಾನದಲ್ಲಿ ಅರೆಸ್ಟ್‌

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ವಂಚಿಸುತ್ತಿದ್ದ ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ವೆಬ್‌ಸೈಟ್‌ ಮೂಲಕ ದೇವಸ್ಥಾನಕ್ಕೆ ಆಗಮಿಸುವ  ಭಕ್ತರಿಂದ ರೂಮ್ ಬುಕ್ಕಿಂಗ್ ಮಾಡಿಸುವುದಾಗಿ ಹೇಳಿ ಹಣ ಪಡೆದು, ನಕಲಿ ರಶೀದಿ ನೀಡಿ ವಂಚಿಸುತಿದ್ದ.ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ದೇವಸ್ಥಾನದ ಕಾರ್‍ಯನಿರ್ವಹಣಾಧಿಕಾರಿ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ ಬಿ., ಕುಂದಾಪುರ ವೃತ್ತ