Konanakunte
ಕೋಣನಕುಂಟೆಯಲ್ಲಿ ಪಿಜಿ ಮಾಲಕಿ ಆತ್ಮಹತ್ಯೆ, ಸ್ನೇಹಿತನೇ ಕೊಲೆಗೈದ ಶಂಕೆ
ಬೆಂಗಳೂರಿನ ಕೋಣನಕುಂಟೆಯಲ್ಲಿ ಪಿಜಿ ಮಾಲಕಿಯೊಬ್ಬರು ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಸ್ತಿಯ ವಿಚಾರಕ್ಕೆ ಸ್ನೇಹಿತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಹೇಮಾವತಿ, ಪಿಜಿ ನಡೆಸುತ್ತಿದ್ದರು. ಪಿಜಿ ಜೊತೆಗೆ ಮನೆ ಕಡೆಯೂ ಆರ್ಥಿಕವಾಗಿ ಚೆನ್ನಾಗಿದ್ದ ಹೇಮಾವತಿಗೆ ಶರವಣ ಎನ್ನುವ ವ್ಯಕ್ತಿಯ ಪರಿಚಯವಾಗಿತ್ತು. ದಿನ ಕಳೆದಂತೆ ಸಲುಗೆಯಲ್ಲಿ ಮಾತಾಡಿಸುತ್ತಿದ್ದ ಶರವಣ, ಹೇಮಾವತಿಗೆ ತುಂಬಾ ಹತ್ತಿರವಾಗಿದ್ದ. ಈ ವೇಳೆ ಹೇಮಾವತಿ, ಶರವಣ ಬಳಿ ಸಾಲ ಪಡೆದಿದ್ದರು.