Thursday, September 17, 2026
Menu

ಕೊಪ್ಪಳದಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಸ್ನೇಹಿತರ ಜೊತೆ ಊಟ ಮಾಡಿ ಹಿಂತಿರುಗುತ್ತಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ನಗರದ ಕೊಪ್ಪಳ ರಸ್ತೆಯಲ್ಲಿ ವೆಂಕಟೇಶ ಕುರುಬರ (31) ಹತ್ಯೆಯಾಗಿದ್ದಾರೆ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ವೆಂಕಟೇಶ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಬೀಳಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ