Saturday, November 08, 2025
Menu

ಕೊಪ್ಪಳದಲ್ಲಿ ಅನಿಲ ಸೋರಿಕೆಗೆ ಕಾರ್ಮಿಕ ಬಲಿ , ಹಲವರು ಅಸ್ವಸ್ಥ

ಕೊಪ್ಪಳ ತಾಲೂಕಿನ ಅಲ್ಲಾನಗರದಲ್ಲಿ ಸ್ಟೀಲ್‌ ಫ್ಯಾಕ್ಟರಿಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ ಕಾರ್ಖಾನೆಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದು,  ಎಂಟಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಅಲ್ಲಾನಗರದ ಹೊಸಪೇಟೆ ಇಸ್ಪಾತ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೊನಾಕ್ಸೈಡ್ ಟ್ಯಾಂಕ್ ಸೋರಿಕೆ ಉಂಟಾಗಿ ಕಾರ್ಮಿಕ ಮಾರುತಿ (24) ಉಸಿರುಗಟ್ಟಿ ಅಸು ನೀಗಿದ್ದಾರೆ. ಅಸ್ವಸ್ಥಗೊಂಡ ಎಂಟಕ್ಕೂ ಅಧಿಕ ಕಾರ್ಮಿಕರನ್ನು ನಗರದ ಕೆ.ಎಸ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮುನಿರಾಬಾದ್ ಠಾಣಾ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ `ಲಕ್ಕುಂಡಿ’!

ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ನಾಡಿನ ಅಭಿವೃದ್ಧಿಯಲ್ಲಿ ಸಂಸ್ಕೃತಿ-ಸಾಹಿತ್ಯ ಕಣ್ಣುಗಳಿದ್ದಂತೆ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ನಾಡಿನ ಅಭಿವೃದ್ಧಿ ಆಗಬೇಕಂದರೆ ಸಂಸ್ಕೃತಿ ಸಾಹಿತ್ಯ ಎರಡು ಕಣ್ಣುಗಳಿದ್ದಂತೆ. ಇವು ಚನ್ನಾಗಿದ್ದರೆ ನಾಡನ್ನು ನೋಡುವ ದೃಷ್ಟಿ‌ ಚನ್ನಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಭಿಪ್ರಾಯಪಟ್ಟರು. ನಗರದಲ್ಲಿ ಬುಧವಾರ ಕರ್ನಾಟಕ

ಜಾತ್ರಾ ಮಹೋತ್ಸವದ ಸಮಾರೋಪದಲ್ಲಿ ಭಾವುಕರಾಗಿ‌ ಕಣ್ಣೀರು ಹಾಕಿದ ಗವಿಶ್ರೀಗಳು

ಕೊಪ್ಪಳ:  ಗವಿಮಠದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಶ್ರೀಮಠದ ಗವಿಶ್ರೀಗಳು ಭಾವುಕರಾಗಿ‌ ಕಣ್ಣೀರು ಹಾಕಿದ ಘಟನೆ ಶುಕ್ರವಾರ ರಾತ್ರಿ ಕೈಲಾಸಮಂಟಪದ ವೇದಿಕೆಯಲ್ಲಿ ನಡೆಯಿತು. ಕೊಪ್ಪಳದ ನೂತನ ರೈಲು ನಿಲ್ದಾಣಕ್ಕೆ ಹೆಸರಿಡುವ ವಿಚಾರದಲ್ಲಿ ಗವಿಸಿದ್ಧೇಶ್ವರ ಹೆಸರಿನ ಜೊತೆ ಬೇರೆ

ಆಕಾಶ-ಸಾಗರದಂತೆ ಕೊಪ್ಪಳ ಗವಿಮಠ ಜಾತ್ರೆ ಹೋಲಿಕೆ ಇರಲಾರದ್ದು: ಸಿದ್ಧಗಂಗಾಶ್ರೀ

ಕೊಪ್ಪಳ: ಕೊಪ್ಪಳದ ಗವಿಮಠ ಜಾತ್ರೆ ಬಗ್ಗೆ ಕೇಳಿದ್ದೆ, ಓದಿದ್ದೆ. ಇದೇ ಮೊದಲ‌ ಸಲ‌ ಕಣ್ತುಂಬಿಕೊಂಡೆ. ಆಕಾಶ ಸಾಗರಕ್ಕೆ ಹೇಗೆ ಹೋಲಿಕೆ ಇಲ್ಲವೋ, ಅದೇ ರೀತಿ ಕೊಪ್ಪಳದ ಗವಿಮಠದ ಜಾತ್ರೆಗೆ ಬೇರೆ ಯಾವ ಜಾತ್ರೆಯನ್ನೂ ಹೋಲಿಕೆ ಮಾಡಲಾಗಲ್ಲ ಎಂದು ತುಮಕೂರಿನ ಶ್ರೀ ಸಿದ್ಧಗಂಗಾಮಠದ

ಐತಿಹಾಸಿಕ ಕೊಪ್ಪಳದ ಗವಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಮಠದ ಶ್ರೀ ಗವಿ ಸಿದ್ದೇಶ್ವರ ಜಾತ್ರೆಗೆ ಚಾಲನೆ ದೊರೆತಿದ್ದು, ಇಂದಿನಿಂದ 15 ದಿನಗಳ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ. ದಾಸೋಹ, ಅನುಭವ, ಜ್ಞಾನ, ಜೀವನ ಚಿಂತನೆಯ ಪಾಠದ ಮೂಲಕ ಭಕ್ತಿ

ಜಾಗೃತಿ ಜಾಥಾ ಮುಂದಿನ ದಿಕ್ಸೂಚಿ: ಗವಿಶ್ರೀ

ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಜಾಗೃತಿ ಜಾಥಾ ಮುಂದಿನ ಭವಿಷ್ಯದ ದಿಕ್ಸೂಚಿ ಎಂದು ಇಲ್ಲಿನ ಸಂಸ್ಥಾನ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ನಗರದಲ್ಲಿ ಶನಿವಾರ ನಡೆದ ವಿಕಲಚೇತನರ ನಡಿಗೆ ಸಕಲಚೇತನರ ಕಡೆಗೆ

ಕೊಪ್ಪಳದಲ್ಲಿ ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ

ಸೆಲ್ಫಿ ಗೀಳಿಗೆ ಅಂಜನಾದ್ರಿ ಬೆಟ್ಟದ ಕಂದಕಕ್ಕೆ ಬಿದ್ದ ಯುವತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಆಂಜನೇಯನ

ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ

ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ