Menu

ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್

ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ ಸರ್ಕಾರಗಳು ಈ ತೀರ್ಮಾನ ಮಾಡಿರಲಿಲ್ಲ. ನಿಂತುಹೋಗಿದ್ದ 5ನೇ ಹಂತದ ಯೋಜನೆಗೆ ಮತ್ತೆ ಚಾಲನೆ ನೀಡಿ ತೊರೆಕಾಡನಹಳ್ಳಿಯಿಂದ ನೀರು ತರಲಾಗಿದೆ. 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸಲಾಗುತ್ತಿದೆ ಎಂದರು.

ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಖಾಸಗಿ

ಮೈಕ್ರೊ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಕೆ ಶಿವಕುಮಾರ್

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ಕಾಂಗ್ರೆಸ್ಸಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ: ಡಿಕೆ ಶಿವಕುಮಾರ್

ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವರನ್ನು ಬಿಜೆಪಿಯವರು ಯೂಸ್ ಅಂಡ್ ಥ್ರೋ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ

ಮಹಾತ್ಮ ಗಾಂಧಿ ಒಪ್ಪದ ಬಿಜೆಪಿ ಅವರ ಪ್ರತಿಮೆ ಮುಂದೆ ಪ್ರತಿಭಟಿಸುತ್ತದೆ: ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು

ಪ್ರಾಧ್ಯಾಪಕರು ದೇಶ ಕಟ್ಟೋ ವಿದ್ಯಾರ್ಥಿಗಳನ್ನು ರೂಪಿಸಬೇಕು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ರೀತಿ ಪ್ರಾಧ್ಯಾಪಕರು ತಮ್ಮ ಜ್ಞಾನವನ್ನು ಕೊಟ್ಟು ಅವರಲ್ಲಿ ಅರಿವಿನ ಬೆಳಕನ್ನು ಉತ್ತೇಜಿಸಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ನೂತನವಾಗಿ ನೇಮಕಗೊಂಡಿರುವ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ

ಕೆಪಿಸಿಸಿ ಕಚೇರಿ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ

ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ

ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ