Wednesday, September 23, 2026
Menu

ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆ ಶಿವಕುಮಾರ್

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಗೆ ಶನಿವಾರ ಬಾಗಿನ ಅರ್ಪಣೆ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ