KS Eshwarappa
ಅಕ್ರಮ ಆಸ್ತಿ ಕೇಸ್ ರದ್ದು ಕೋರಿ ಕೆಎಸ್ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ ಮಾಡಿದ್ದರು. ಲೋಕಾಯುಕ್ತ ಎಸ್ಪಿಪಿ ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿ, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್ ಮುಂದೆ ಸ್ಪಷ್ಟಪಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ
ಕೆಎಸ್ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ
ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ. ಜನವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.



