ksca election
ಕೆಎಸ್ ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಸೋಲು
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್ 191 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. 20 ಸುತ್ತುಗಳ ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ ವೆಂಕಟೇಶ್ ಪ್ರಸಾದ್ ಒಟ್ಟು 749 ಮತ ಗಳಿಸಿದರೆ, ಬ್ರಿಜೇಶ್ ಪಟೇಲ್ ಬಣದ ಕೆ.ಎನ್.ಶಾಂತಕುಮಾರ್ 558 ಮತ ಪಡೆದರು.


