KSR Authority
ಸಂಗೊಳ್ಳಿಯಲ್ಲಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲೇ ಮಾದರಿ ಶಾಲೆಯಾಗಿ ರೂಪಿಸಿ: ಸಿಎಂ
ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ನಿರ್ಮಿಸಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲಿಯೇ ಮಾದರಿ ಸೈನಿಕ ಶಾಲೆಯನ್ನಾಗಿ ರೂಪಿಸಬೇಕು. ನಿರ್ಮಾಣ ಕಾಮಗಾರಿ ಗುಣಮಟ್ಟದ ಪರಿಶೀಲನೆ ನಡೆಸಿದ ಬಳಿಕ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು. ಸೈನಿಕ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕ್ರಮ ಕೈಗೊಳ್ಳಬೇಕು. ಕ್ರೀಡಾ ಚಟುಟಿಕೆಗಳು ಸೇರಿದಂತೆ ಎಲ್ಲಾ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ


