Menu

15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಳಗಾವಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿನ 15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆಯ ಜೊತೆಗೆ, ಸುಸ್ಥಿತಿಯಲ್ಲಿರುವ ಕೆಲ ವಾಹನಗಳಿಗೆ ಗುಜರಿ ನೀತಿಯಡಿ ವಿನಾಯಿತಿ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮೇಲ್ಮನೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬುಧವಾರ ಜೆಡಿಎಸ್ ನ‌ ಸದಸ್ಯ ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರಿಗೆ ಇಲಾಖೆ ಒಳಗೊಂಡಂತೆ ವಿವಿಧ ಇಲಾಖೆಯಲ್ಲಿ 15 ವರ್ಷ ಮೀರಿದ

ಶಕ್ತಿ ಯೋಜನೆಗೆ ಅವಹೇಳನ: ಸಾರಿಗೆ ನೌಕರರಿಗೆ ಎಚ್ಚರಿಕೆ

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಕೆಲವು ಸಾರಿಗೆ ನೌಕರರು ಅವಹೇಳನಕರವಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಯಾಣಿಕರಿಂದಲೂ ಈ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಸಾರಿಗೆ ನಿಗಮಗಳು ಚಾಲಕ-ನಿರ್ವಾಹಕರಿಗೆ ಖಡಕ್ ಸುತ್ತೋಲೆ ಹೊರಡಿಸಿವೆ. ಮಹಿಳೆಯರಿಗೆ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ

ದೀಪಾವಳಿಯೊಂದಿಗೆ ಸತತ ಐದು ದಿನ ರಜೆ: ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್‌

ದೀಪಾವಳಿ ಹಬ್ಬದೊಂದಿಗೆ ಸರಣಿ ರಜೆಗಳ ಹಿನ್ನೆಲೆ ಬೆಂಗಳೂರಿನಿಂದ ರಾಜ್ಯದ ನಾನಾ ಜಿಲ್ಲೆಗಳಿಗೆ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆಗೊಳಿಸಿದೆ. ಅಕ್ಟೋಬರ್‌ 17ರಿಂದ 20ರ ವರೆಗೆ 2,500 ಹೆಚ್ಚುವರಿ ಬಸ್‌ ಕಾರ್ಯಾಚರಣೆ ನಡೆಸಲಿವೆ.

ರಾಜ್ಯದ ಹೆಮ್ಮೆಯ ಕೆಎಸ್‌ಆರ್‌ಟಿಸಿಗೆ 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಆಯೋಜಿಸಿದ್ದ 15ನೇ ವಿಶ್ವ ಸಂವಹನ ಸಮಾವೇಶ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಯ ಮೂಲಕ ಕೆಎಸ್‌ಆರ್‌ಟಿಸಿ ಆಧುನಿಕ

KSRTC ದಸರಾ ವಿಶೇಷ ಟೂರ್‌ ಪ್ಯಾಕೇಜ್‌: ಯಾವಾಗಿಂದ ಆರಂಭ? ದರ ಎಷ್ಟು?

ನಾಡಹಬ್ಬ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್​ ಪ್ಯಾಕೇಜ್ (Tour Package)​ ಪ್ರಾರಂಭಿಸಿದೆ. ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 7 ರವರೆಗೆ ಈ ಪ್ಯಾಕೇಜ್​ನ ಸೇವೆಯ ಬಸ್‌ಗಳು ಕಾರ್ಯಾ ನಿರ್ವಹಿಸಲಿವೆ.

ನೆಲಮಂಗಲದಲ್ಲಿ ಪ್ರಯಾಣಿಕರಿದ್ದ ಬಸ್ಸನ್ನು ಸುರಕ್ಷಿತ ನಿಲುಗಡೆಗೊಳಿಸಿ ಚಾಲಕ ಸಾವು

ಆರೋಗ್ಯ, ಅನಾರೋಗ್ಯ, ವಯಸ್ಸು, ಹಳ್ಳಿ, ನಗರ, ಶ್ರಮಿಕ, ಸೋಮಾರಿ ಎಂಬ ವ್ಯತ್ಯಾಸವೇ ಇಲ್ಲದೆ ಹೃದಯಾಘಾತದಿಂದ ಸಾವು ಎಂಬುದು ಇಂದು ಸಾಮಾನ್ಯ ಎಂಬಂತಾಗಿದೆ. ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರು ನೆಲಮಂಗಲದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತ ಕಾಣಿಸಿಕೊಂಡು ಸಾವಿನ ಕದ ತಟ್ಟುತ್ತಿದ್ದ ವೇಳೆ ಕೂಡ ಆ

ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ

ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಜಾಹೀರಾತು ತೆರವು

ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು

ಸಾರಿಗೆ ನಿಗಮಗಳಿಗೆ 5 ವರ್ಷಗಳಲ್ಲಿ 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ ಸೇರಿದಂತೆ ಆರ್ಥಿಕ ಸೌಲಭ್ಯ ನಿರ್ವಹಣೆಯಿಂದಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನ ಪ್ರಶ್ನೋತ್ತರ

2 ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: 5 ಮಂದಿ ದುರ್ಮರಣ

ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಐವರು ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಆದೋನಿ ತಾಲೂಕಿನ ಪಾಂಡವಗಲ್ ಗ್ರಾಮದ ಬಳಿ ನಡೆದಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್, ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಬೈಕ್ನಲ್ಲಿದ್ದ ಹೇಮಾದ್ರಿ, ಪತ್ನಿ ನಾಗರತ್ನಮ್ಮ,