Menu

ಮದ್ದೂರಿನಲ್ಲಿ ಬಸ್‌ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಬಸ್ಸಿನ ಹಿಂಬದಿ ಚಕ್ರ ಯುವಕನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಆತ ಅಸು ನೀಗಿದ್ದಾನೆ. ಯುವಕ ಆತ್ಮಹತ್ಯೆಗೆ ಶರಣಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸ್ಥಗಿತ

ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,