Menu

ಯಾರಲ್ಲಿ ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್‌ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ ಮೇಲೆ ಹಲ್ಲೆ ನಡೆದಿದೆ. ವಿಜಯನಗರ ಜಿಲ್ಲೆಯ ನಿವಾಸಿ ಶ್ರೀಧರ್​ ಹಲ್ಲೆ ಮಾಡಿದ ವ್ಯಕ್ತಿ. ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಿಂದ ಗಂಗಾವತಿಗೆ ಹೋಗುತ್ತಿದ್ದ ಬಸ್‌ಗೆ ಶ್ರೀಧರ್ ಕುಡಿದ ಮತ್ತಿನಲ್ಲಿ

ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್‌

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೆಎಸ್ಸಾರ್ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು

ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ