KSRTC Mysore unit
ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ
ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು ಪುರುಷರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊದಲೇ ಬಸ್ಸುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ದುಡ್ಡು ಕೊಟ್ಟು ಟಿಕೆಟ್ ಪಡೆದರೂ ನಮಗೆ ಸೀಟು ಸಿಗುತ್ತಿಲ್ಲ. ನಿಂತುಕೊಂಡೇ ಪ್ರಯಾಣಿಸಬೇಕಾಗಿದೆ ಎಂದು ಪುರುಷರು ಸಿಟ್ಟು


