Menu

ಪಂಜಾಬ್‌ನಿಂದ ಕುರುಬೂರು ಶಾಂತಕುಮಾ‌ರ್ ಬೆಂಗಳೂರಿಗೆ ಏರ್‌ಲಿಫ್ಟ್‌

ಪಟಿಯಾಲ ಬಳಿ ಶುಕ್ರವಾರ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾ‌ರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಪಟಿಯಾಲದ ಬಳಿ ಅಪಘಾತಕ್ಕೀಡಾಗಿತ್ತು. ಶಾಂತಕುಮಾ‌ರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಷಯ