Kyasanur Forest Disease
ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ


