Ladakh Statehood Protest
ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೊತ್ತಿ ಉರಿಯುತ್ತಿದೆ ಲಡಾಖ್: ಹಿಂಸಾಚಾರಕ್ಕೆ ನಾಲ್ವರು ಬಲಿ
ಕೇಂದ್ರಾಡಳಿತ ಪ್ರದೇಶ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಸಂಘರ್ಷಕ್ಕೆ 4 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ವರದಿಯಾಗಿದೆ. ಲಡಾಖ್ ಅಪೆಕ್ಸ್ ಬಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಹಲವು ವಾಹನಗಳು ಸುಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ


