Menu

ಇಂದಿನಿಂದ ಕೆಆರ್ ಎಸ್ ನಲ್ಲಿ ಐದು ದಿನ ಕಾವೇರಿ ಆರತಿ, ಉಚಿತ ಲಾಡು ಪ್ರಸಾದ

ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ