Menu

ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವು ಗುರಿ: ಸಚಿವ ಎನ್.ಎಸ್. ಭೋಸರಾಜು

ಬೆಳಗಾವಿ, ಡಿಸೆಂಬರ್ 16: ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ (ಬಜೆಟ್) ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ  ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಗ್ರಾಮೀಣಾಭಿವೃದ್ದಿ ಹಾಗೂ ಐಟಿ&ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಜೊತೆಗೂಡಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಕೆರೆ

ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಆರಂಭಕ್ಕೆ ಸಚಿವ ಬೈರತಿ ಸುರೇಶ್ ಗಡುವು

ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಮಾಸಾಂತ್ಯದ ವೇಳೆಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಗಡುವು ವಿಧಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ

ಮಡಿಕೇರಿಯಲ್ಲಿ ಆಟವಾಡಲು ಕೆರೆಗಿಳಿದ ಬಾಲಕಿ ಸಾವು

ಕೊಡಗಿನ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೆ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬವರ 9 ವರ್ಷದ