lakkundi
ಲಕ್ಕುಂಡಿಯಲ್ಲಿ 44 ರಕ್ಷಿತ ಸ್ಮಾರಕಗಳಾಗುವ ನಿರೀಕ್ಷೆ: ಸಚಿವ ಎಚ್.ಕೆ.ಪಾಟೀಲ
ಬಾಗಲಕೋಟೆ: ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಸ್ಥಳವಾಗಿ ಘೋಷಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಲಕ್ಕುಂಡಿ ಉತ್ಖನನಕ್ಕೆ ಚಾಲನೆ ನೀಡಿದ್ದು, ಕಳೆದ ನಾಲ್ಕು ದಿನಗಳಲ್ಲಿ ದೊರೆತಿರುವ ವಸ್ತುಗಳು ಭೂಮಿಯ ಮೇಲ್ಮೈ ಭಾಗದಲ್ಲೇ ಪತ್ತೆಯಾಗಿವೆ. ಮುಂದಿನ ದಿನಗಳಲ್ಲಿ ಭೂಮಿಯ ಆಳದಲ್ಲಿ ಇನ್ನೂ ಅಪಾರ ಪ್ರಮಾಣದ ಪಾರಂಪರಿಕ, ಐತಿಹಾಸಿಕ ಹಾಗೂ ಕಲಾ
ಲಕ್ಕುಂಡಿಯ ಮನೆಯೊಳಗೆ ಚಾಲುಕ್ಯರ ಕಾಲದ ಪುರಾತನ ದೇವಸ್ಥಾನ ಪತ್ತೆ!
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಪರೂಪದ ಪುರಾತನ ದೇವಸ್ಥಾನ ಪತ್ತೆಯಾಗಿದ್ದು, ಗಮನ ಸೆಳೆದಿದೆ. ಹೊರಗಿನಿಂದ ನೋಡಿದರೆ ಸಾಮಾನ್ಯ ಮನೆಯಂತಿರುವ ಚೌಕಿಮಠ ಮನೆಯ ಸಂಕೀರ್ಣದ ಒಳಭಾಗದಲ್ಲಿ ಚಾಲುಕ್ಯರ ಕಾಲದ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನ ಕಂಡುಬಂದಿದೆ. ಚೌಕಿಮಠ ಮನೆತನದ ಆವರಣದಲ್ಲಿ ಸುಮಾರು
ಲಕ್ಕುಂಡಿಯ ಮತ್ತೆ 8 ತಾಣ ಸಂರಕ್ಷಿತ ಸ್ಮಾರಕ: ಸಚಿವ ಎಚ್‌ಕೆ ಪಾಟೀಲ
ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರ ದಿಂದ ಘೋಷಣೆ ಮಾಡಲಾಗುವುದು ಎಂದು ಪ್ರವಾಸೋದ್ಯಮ
ಲಕ್ಕುಂಡಿಯಲ್ಲಿ 2ನೇ ದಿನದ ಉತ್ಖನನ ಅಂತ್ಯ: ಪುರಾತನ ಆವಶೇಷ ಪತ್ತೆ
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಎರಡನೇ ದಿನದ ಉತ್ಖನನ ಕಾರ್ಯ ಅಂತ್ಯಗೊಂಡಿದ್ದು, ಪ್ರಾಚೀನ ಕಾಲದ ಶಿಲೆ ಹಾಗೂ ಅಪರೂಪದ ವಸ್ತುಗಳು ಪತ್ತೆಯಾಗಿವೆ. ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉತ್ಖನನ ನಡೆದಿದ್ದು, ಅಧಿಕಾರಿಗಳು ಸೇರಿದಂತೆ 33 ಮಂದಿ ಭಾಗಿಯಾಗಿದ್ದರು. ಉತ್ಖನನ
ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನಕ್ಕಾಗಿ ಸರ್ಕಾರ ಪ್ರಯತ್ನ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ, ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ `ಲಕ್ಕುಂಡಿ’!
ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.




