Menu

ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ

ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ ಹಲವು ಕಡೆ ಡ್ರೋಣ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಭಾರತ ವಾಯುಪಡೆ ವಿಮಾನಗಳು ಪಾಕಿಸ್ತಾನದ ವಿಮಾನ ನಿಲ್ದಾಣ ಹಾಗೂ ವಾಯುನೆಲೆಗಳ ಮೇಲೆ ಪ್ರತಿದಾಳಿ ನಡೆಸಿ

ಪಾಕಿಸ್ತಾನದಿಂದ ರಾತ್ರಿ 300-400 ಕ್ಷಿಪಣಿ ದಾಳಿ ಯತ್ನ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ

ಭಾರತ ಗಡಿಯೊಳಗೆ ನುಗ್ಗಲು ಯತ್ನಿಸಿದ 7 ಉಗ್ರರ ಹತ್ಯೆ

ಶ್ರೀನಗರ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್‌ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹತ್ಯೆಗೈದಿದೆ. ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ

ಡಿಸೆಂಬರ್ ವೇಳೆಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ:  ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ ನೀರಿನ 5 ನೇ ಹಂತ, ಎತ್ತಿನಹೊಳೆ ಸೇರಿದಂತೆ ಹಲವಾರು ಅಸಾಧ್ಯಗಳನ್ನು ಸಾಧ್ಯವಾಗಿಸಿದ

ಜಾತಿ ಜನಗಣತಿ ಭಾರತೀಯ ಜುಮ್ಲಾ ಪಾರ್ಟಿಯ ಡೋಂಗಿತನ ಜಗಜ್ಜಾಹೀರು: ಕೃಷ್ಣಬೈರೇಗೌಡ

ಕೋಲಾರ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ವಿರೋಧಿಸುತ್ತಿರುವ ಬಿಜೆಪಿಯ ಡೋಂಗಿತನ ಜಗಜ್ಜಾಹೀರಾಗಿದೆ. ಸಮೀಕ್ಷಾ ವರದಿ ಸಲ್ಲಿಸಿದ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಿದ್ದೇ ಬಿಜೆಪಿ ಸರ್ಕಾರ. ಆಯೋಗದ ವರದಿಗೆ ಸಹಿ ಹಾಕಿರುವ ಸದಸ್ಯರನ್ನು ನೇಮಿಸಿದ್ದೂ ಬಿಜೆಪಿ ಸರ್ಕಾರ’ ಎಂದು ಕಂದಾಯ

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಪಾಲಿಕೆ ಆಯುಕ್ತರಿಗೆ ಭೈರತಿ ಸುರೇಶ್ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಾಲಿಕೆಗಳ ವ್ಯಾಪ್ತಿಯಲ್ಲಿನ

ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಸೇನೆಗೆ ಗ್ರೀನ್ ಸಿಗ್ನಲ್!

ಪಹಲ್ಗಾವ್ ನಲ್ಲಿ ಉಗ್ರರು ನಡೆದ ಮಾರಣಾಂತಿಕ ದಾಳಿಗೆ ಪ್ರತಿಯಾಗಿ ನಡೆಸುವ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಗೆ ಪ್ರಧಾನಿ ನರೇಂದ್ರ ಮೋದಿ ಪೂರ್ಣ ಅಧಿಕಾರ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ

ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ:  “ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ”

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್

ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು