Law exam question paper
ಕಾನೂನು ಪದವಿ ಪ್ರಶ್ನೆಪತ್ರಿಕೆ ಲೀಕ್: ಉಪಪ್ರಾಂಶುಪಾಲ ಸೇರಿ ಮೂವರು ಸೆರೆ
ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರುಣ್ ಮತ್ತು ಜಗದೀಶ್ ಎಂಬವರನ್ನು ಬಂಧಿಸಿದ್ದಾರೆ. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಸೋರಿಕೆಯಾದ ಪ್ರಶ್ನೆಪತ್ರಿಕೆ ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಹರಿದಾಡಿತ್ತು. ಈ ಸಂಬಂಧ ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ


