Menu

ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್​​ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್​ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡವು ಸಲ್ಲಿಸಿರುವ ವರದಿಯಲ್ಲಿ ಜೀವಾಗೆ ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರುವುದನ್ನು ಉಲ್ಲೇಖಿಸಲಾಗಿದೆ.