Lawyers protest
ಹೈಕೋರ್ಟ್ ಜಡ್ಜ್ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ
ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು ಹಠಾತ್ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಕೊಲಿಜಿಯಂ ಮರುಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು. ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ನ್ಯಾಯಮೂರ್ತಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೊಲಿಜಿಯಂ,


