Menu

ನಾಳೆಯಿಂದ ರಾಜ್ಯದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ದುಬಾರಿ ಲೈಫ್ ಟೈಮ್ ಟ್ಯಾಕ್ಸ್

ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ರಾಜ್ಯದಲ್ಲಿ ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯೆಲ್ಲೋ ಬೋರ್ಡ್ ವಾಹನ ಖರೀದಿಸಿದವರಿಗೆ ಬಲು ದುಬಾರಿಯಾಗಿ ಪರಿಣಮಿಸಲಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ ತೆರಿಗೆ ಪಾವತಿಸಬೇಕು. ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ- 2025’ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಲಾಗಿದೆ. ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯ ಪಾಲರು ಅಂಕಿತ ಹಾಕಿದ್ದಾರೆ.