Menu

ಮುರ್ಡೇಶ್ವರದಲ್ಲಿ ಲಿಫ್ಟ್‌ ಕುಸಿದು ಕಟ್ಟಡ ಕಾರ್ಮಿಕರಿಬ್ಬರ ಸಾವು

ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಲಿಫ್ಟ್‌ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್‌ ಕುಸಿದು ಈ ದುರಂತ ಸಂಭವಿಸಿದೆ. ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದ್ದು, ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರ ಬಿದ್ದ