Menu

ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲ ಮನ್ನಾ ಇಲ್ಲ: ಡಿಕೆ ಸುರೇಶ್‌ 

“ಬೆಳೆಸಾಲ,‌ ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ.‌ ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್  ಹೇಳಿದ್ದಾರೆ. ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕನಕಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕನಕಪುರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೆಳೆಸಾಲ, ಸ್ತ್ರೀ ಶಕ್ತಿ ಸಹಾಯ