Menu

ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹೊಸ ವರ್ಷದ ಸಂಕಲ್ಪದ ಬಗ್ಗೆ ಕೇಳಿದಾಗ, “2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರ ವರ್ಷದಲ್ಲಿ ನಾವು