Menu

ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ ಮನೆ, ಸಾಗರ ತಾಲೂಕು ಆಚಾಪುರದ ಮಲ್ನಾಡ್ ಇಂಟರ್ ನ್ಯಾಶನಲ್ ಸ್ಕೂಲ್​ಗಳ ಮೇಲೆ ದಾಳಿ ನಡೆಸಲಾಗಿದೆ. ಬಿಸಿಎಂ ಇಲಾಖೆಯ ಅಧಿಕಾರಿ ರಾಘವೇಂದ್ರ ಅವರ ಶಿವಮೊಗ್ಗದ ಚಾಲುಕ್ಯನಗರ ಬಡಾವಣೆಯ ಮನೆ

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ  ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಹೆಬ್ಬಾಳ ಪಶುವೈದ್ಯಕೀಯ ಕಾಲೇಜು ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಿಗೆ ಲೋಕಾಯುಕ್ತ ಏಕಕಾಲಕ್ಕೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬವರಿಗೆ ಸೇರಿದ ಮೈಸೂರಿನ ಐದು ಸ್ಥಳ, ಬೆಂಗಳೂರಿನ ಆರು ಕಡೆ ದಾಳಿ

ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್‌ ಲೋಕಾಯುಕ್ತ ಬಲೆಗೆ

ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ

ತುಮಕೂರು ಪಿಎಸ್‌ಐ ಲೋಕಾಯುಕ್ತರ ಬಲೆಗೆ

ತುಮಕೂರು: ಠಾಣೆಯ ವಶದಲ್ಲಿದ್ದ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ್ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗಿನ ಜಾವ ಬಂಧಿಸಿದ್ದಾರೆ. ವಾಹನ ಬಿಡುಗಡೆಗೆ ಒಟ್ಟು ₹1 ಲಕ್ಷ ಲಂಚಕ್ಕೆ ಬೇಡಿಕೆ

ಜಮೀರ್‌ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್‌ ಖಾನ್‌ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ರಾಯಚೂರಿನಲ್ಲಿ ಎಇಇ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ‌ ದಾಳಿ

ರಾಯಚೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಅವರಿಗೆ ಸೇರಿರುವ ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ‌ ಅಧಿಕ

ರಾಮನಗರದಲ್ಲಿ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಡಿಸಿಎಂ ಡಿಕೆ ಶಿವಕುಮಾರ್‌ ಅವರ ತವರು ಕ್ಷೇತ್ರದ ರಾಮನಗರದಲ್ಲಿ ತಡರಾತ್ರಿ ಲೋಕಾಯುಕ್ತ ದಾಳಿ ನಡೆದಿದ್ದು, ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ತಂಗರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ನೌಕರರ ಸಂಘದ ಕಚೇರಿ ಮೇಲೆ ಸಾರ್ವಜನಿಕರ

ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ನಿವಾಸ , ಕಚೇರಿಗಳಿಗೆ ಲೋಕಾಯುಕ್ತ ದಾಳಿ

ರಾಜ್ಯದ ನಾನಾ ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿಯಾಗಿದೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ

ಅಕ್ರಮ ಆಸ್ತಿ ಗಳಿಕೆ: ಶಾಸಕ ಟಿ‌‌.ಡಿ.ರಾಜೇಗೌಡ ಮನೆ ಮೇಲೆ‌ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಶಾಸಕ ಟಿ‌‌.ಡಿ.ರಾಜೇಗೌಡ ಅವರ ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದ ಮನೆ ಮೇಲೆ‌ ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು, ಎಫ್‌ಐಆರ್‌ ದಾಖಲಾದ ಬಳಿಕ