Menu

ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲವೆಂದು ಹೆಂಡತಿಯ ಕಿರಿಕಿರಿ: ಕೊಲೆಗೈದು ಹೃದಯಾಘಾತ ಕತೆ ಕಟ್ಟಿದ ಗಂಡ

ಬೆಳಗಾವಿಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಗಂಡನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ರಾಜೇಶ್ವರಿ (21) ಕೊಲೆಯಾಗಿದ್ದು, ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಆರೋಪಿ. ಪತ್ನಿಯನ್ನು ಕೊಂದ ಆತ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಕಥೆ ಕಟ್ಟಿದ್ದ. ಅಂತ್ಯಕ್ರಿಯೆಗೆ ಬಂದ ಪೋಷಕರು ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನಗೊಂಡು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ