Lorry strike
ಲಾರಿ ಮುಷ್ಕರ ಮೂರನೇ ದಿನಕ್ಕೆ, ಸರಕು ಸಾಗಣೆಯಲ್ಲಿ ವ್ಯತ್ಯಯ
ಡಿಸೇಲ್ ಬೆಲೆ ಹೆಚ್ಚಳ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಲಾರಿ ಮಾಲೀಕರು ನಡೆಸುತ್ತಿರುವ ಲಾರಿ ಮುಷ್ಕರವು ಮೂರನೇ ದಿನಕ್ಕೆ ಕಾಲಿರಿಸಿದೆ. ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು ಶುರುವಾಗಿದೆ. ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಪದಾಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಎರಡು ಸುತ್ತಿನ ಸಂಧಾನ ಸಭೆಗಳು ಫಲ ನೀಡಿಲ್ಲ. ಇದರಿಂದಾಗಿ


