Menu

ನಿಷ್ಠಾವಂತ ರಾಜಕಾರಣಿ ಮೇಟಿಯವರು ನನಗೆ ಅತ್ಯಂತ ಆಪ್ತ: ಸಿದ್ದರಾಮಯ್ಯ

ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು. ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು,