M P Renukacharya
ಪ್ರಚೋದನಕಾರಿ ಹೇಳಿಕೆ ಆರೋಪ: ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಮೌಖಿಕವಾಗಿ ಆಕ್ಷೇಪಿಸಿರುವ ಕರ್ನಾಟಕ ಹೈಕೋರ್ಟ್, ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಎಕ್ಸ್‌ಟೆನ್ಷನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಬಿಜೆಪಿಯ


