Menu

ಮದ್ದೂರು ಗಲಭೆ: ಜಾತಿಧರ್ಮ ಪರಿಗಣಿಸದೆ ತಪ್ಪೆಸಗಿದವರ ವಿರುದ್ಧ ಕ್ರಮವೆಂದ ಸಿಎಂ

ಮದ್ದೂರಿನ ಗಲಭೆ  ಪ್ರಕರಣಕ್ಕೆ ಸಂಬಂಧಿಸಿದಂತೆ  21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ ವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ ಚಲೋ ಎಂಬ ಕಾರ್ಯಕ್ರಮ ಮಾಡಿದರು.