Menu

ಗಣೇಶ ವಿಸರ್ಜನೆ: ಮದ್ದೂರಲ್ಲಿ ಕಲ್ಲು ತೂರಾಟ, ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟ

ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಇಂದು ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.  ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ರಾಮ್ ರಹೀಂ ನಗರ ಉದ್ವಿಗ್ನಗೊಂಡಿದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿಗೊಳಿಸಿದೆ, ಸ್ಥಳಕ್ಕೆ ಡಿಸಿ ,ಎಸ್ಟಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಮದ್ದೂರು ಪಟ್ಟಣದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.