Menu

ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು

ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಬೆಳಗಿನ ನಾಲ್ಕು-ಐದು ಗಂಟೆ ವೇಳೆಗೆ ಈ ದುರಂತ ಸಂಭವಿಸಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಉಳಿದ ಮಕ್ಕಳು ಸಣ್ಣಪುಟ್ಟ