Menu

ಮಸೀದಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಇರಿದು ಹತ್ಯೆ

ಮಸೀದಿಯಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಾರಾಷ್ಟ್ರ ಕಾಂಗ್ರೆಸ್​ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಕೋಲಾ ಜಿಲ್ಲೆಯ ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಯಲ್ಲಿ ಹಿದಾಯತುಲ್ಲಾ ಪಟೇಲ್ ನಮಾಜ್ ಮುಗಿಸಿ ಮರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಮಧ್ಯಾಹ್ನ 1.30ರ ಸುಮಾರಿಗೆ ಈ ದಾಳಿ ನಡೆದಿದ್ದು ಪಟೇಲ್ ಅವರ ಕುತ್ತಿಗೆ ಮತ್ತು ಎದೆಗೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವವಾಗಿತ್ತು. ತಕ್ಷಣವೇ ಅಕೋಟ್‌ನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.