Makkala Jathre
ವಿಡಿಯೊ ಗೇಮ್ ಗಳು ಮಕ್ಕಳ ಕ್ರಿಯಾಶೀಲತೆಯನ್ನು ಕುರುಡಾಗಿಸುತ್ತವೆ: ಕೆವಿ ಪ್ರಭಾಕರ್
ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದ್ದಾರೆ. ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್


