Malur priest murdered
ಮಾಲೂರಿನಲ್ಲಿ ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ಮಾಟ-ಮಂತ್ರ ಪೂಜಾರಿಯ ಹತ್ಯೆ
ಮಾಲೂರಿನಲ್ಲಿ ಕಾಳಿ ದೇವಿಯ ಆರಾಧಿಸುತ್ತ ಜನರ ದೆವ್ವ, ಗಾಳಿ ಬಿಡಿಸುವ ಕೆಲಸ, ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ ಸೋಮವಾರ ಪುಷ್ಯ ಅಮಾವಾಸ್ಯೆಯ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದ್ದು, ಆಂಜಿ ಅಲಿಯಾಸ್ ಆಂಜಿನಪ್ಪ(45) ಕೊಲೆಯಾದವರು. ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆಂಜಿನಪ್ಪ ಮಾಲೂರಿನಲ್ಲಿ ಬೂಸಾ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಹಿಂದೂ ಸಮಾಜೋತ್ಸವ ಸಮಿತಿ


