man death
ಗಂಡ ಹೆಂಡತಿ ಜಗಳ ಬಿಡಿಸಲು ಹೋದಾತ ಮಚ್ಚಿನೇಟಿಗೆ ಬಲಿ
ಕೌಟುಂಬಿಕ ಕಲಹದ ಹಿನ್ನೆಲೆ ಗಂಡ ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಮಚ್ಚಿನೇಟು ಬಿದ್ದು ಪ್ರಾಣ ಹೋಗಿರುವ ಘಟನೆ ಚಿತ್ರದುರ್ಗದ ಬುದ್ಧ ವೃತ್ತದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸ್ಟೇಡಿಯಂ ರಸ್ತೆಯಲ್ಲಿನ ಬುದ್ಧ ವೃತ್ತದಲ್ಲಿ ಸಾಧಿಕ್‌ವುಲ್ಲಾ ಎಂಬಾತ ಪತ್ನಿಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿದ್ದ. ಈ ವೇಳೆ ಜಗಳ ಬಿಡಿಸಲು ಮುಂದಾದ ತಾಜ್‌ಪೀರ್ (42) ಮೇಲೆ ಸಾಧಿಕ್‌ವುಲ್ಲಾ ಮಚ್ಚಿನಿಂದ ಹಲ್ಲೆ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡು ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ
ಆನೇಕಲ್ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ತಮಿಳುನಾಡು – ಕರ್ನಾಟಕ ಗಡಿ ಭಾಗದ ಆನೇಕಲ್ ಸಮೀಪ ಬ್ಯಾಲದ ಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಗನಿಗೆ ಗಂಭೀರ ಗಾಯಗಳಾಗಿವೆ. ಗ್ರಾಮದ ವೆಂಕಟೇಶ್ ಕಾಡಾನೆ ದಾಳಿಗೆ ಬಲಿಯಾದವರಉ. ಬೈಕ್‌ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್ ಅವರ ಮೇಲೆ ಕಾಡಾನೆ
ಬಾಗಲಕೋಟೆ ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ಬಾಗಲಕೋಟೆಯ ನವನಗರದ 49ನೇ ಸೆಕ್ಟರ್‌ನಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲವು ದಿನಗಳಿಂದ ನೆಲಕ್ಕೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ಸಾವು ಸಂಭವಿಸಿದೆ.
ನಿಶ್ಚಿತಾರ್ಥ ಮುಗಿಸಿ ವಾಪಸಾಗುತ್ತಿದ್ದಾಗ ಹನೂರಿನಲ್ಲಿ ಬಸ್ ಪಲ್ಟಿಯಾಗಿ ವ್ಯಕ್ತಿ ಸಾವು
ಚಾಮರಾಜನಗರದ ಹನೂರು ತಾಲೂಕಿನ ಬಂಡಳ್ಳಿ ಹೊರ ವಲಯದ ತೆಳ್ಳನೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ನವೀನ್(38) ಮೃತಪಟ್ಟವರು. ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು
ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್ ಮುರಿದು ಒಬ್ಬನ ಸಾವು
ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್
ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಸ್ವಪ್ರೇರಿತವಾಗಿ ಒಳಗಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕಲಬುರಗಿಯ ನಾಗೇಶ್ (33) ಎಂದು ಗುರುತಿಸಲಾಗಿದೆ. ಕೃಷಿಕರಾಗಿದ್ದ ಅವರು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಮೆಡಿಸನ್ಸ್ ಕಂಪನಿಯೊಂದಕ್ಕೆ ಆ್ಯಪ್ ಮೂಲಕ ಮೆಡಿಸಿನ್ ಪ್ರಯೋಗಕ್ಕೆ
ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಗೆ ವ್ಯಕ್ತಿ ಬಲಿ
2023ರಲ್ಲಿ ಪೆರು ಸೇರಿದಂತೆ ಆಫ್ರಿಕಾ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಗುಲ್ಲೆನ್ ಬಾರ್ ಸಿಂಡ್ರೋಮ್ ಎಂಬ ಮಾರಣಾಂತಿಕ ರೋಗ ಇದೀಗ ಭಾರತದಲ್ಲಿ ಹೆಚ್ಚಾಗುತ್ತಿದ್ದು, ಆತಂಕ ತಂದೊಡ್ಡಿದೆ. ಸೋಲಾಪುರದ ವ್ಯಕ್ತಿ ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಆರೋಗ್ಯ ಸಮಸ್ಯೆಗೆ ಬಲಿಯಾದ ಮೊದಲಿಗರು. ಪುಣೆಯಲ್ಲಿ ಗುಲ್ಲೆನ್ ಬಾರ್
ತನ್ನದೇ ಗನ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ
ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ
ಅಕ್ರಮ ಕಸ ಡಂಪಿಂಗ್ ಹೊಗೆಯಿಂದ ವ್ಯಕ್ತಿ ಸಾವು
ಹೊಸಕೋಟೆ ತಾಲೂಕಿನ ಭುವನಹಳ್ಳಿಯಲ್ಲಿ ಅಕ್ರಮ ಕಸದ ಡಂಪಿಂಗ್‌ನಿಂದ ಹೊರಹೊಮ್ಮುವ ಹೊಗೆಯಿಂದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐವತ್ತು ವರ್ಷದ ಮುನೇಗೌಡ ಮೃತಪಟ್ಟವರು. ಕಸದ ರಾಶಿಯಿಂದ ಬಂದ ಹೊಗೆಯ ಕಾರಣ ಮುನೇಗೌಡ ಅವರಿಗೆ ಏಕಾಏಕಿ ಉಸಿರುಗಟ್ಟಿದೆ. ಅವರನ್ನು ಆಸ್ಪತ್ರೆಗೆ




